File size: 1,386 Bytes
2e70779 |
1 2 3 4 5 |
ಹುಬ್ಬಳ್ಳಿ: ದೇಶ ವಿಭಜಿಸುವ ಬಗ್ಗೆ ಹೇಳಿಕೆ ನೀಡಿದ ಸಂಸದ ಡಿ.ಕೆ. ಸುರೇಶ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಈಶ್ವರಪ್ಪ ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡರು. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು. ದೇಶ ಒಡೆಯೋ ಮಾತು ಬರಬಾರದು. ದೇಶ ಒಡೆಯೋ ಮಾತು ಸರಿ ಅಲ್ಲ. ಇದು ದೇಶದ್ರೋಹಿ ಕೃತ್ಯ ಎಂದು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. |