File size: 2,917 Bytes
2e70779
 
 
 
 
 
1
2
3
4
5
6
7
ಬೆಂಗಳೂರು: ‘ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಮಂಡಳಿಗೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷ ಮತ್ತು ಸದಸ್ಯರನ್ನು ಭರ್ತಿ ಮಾಡಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
‘ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಮುಖ್ಯಸ್ಥರನ್ನು ನೇಮಿಸಲು ನಿರ್ದೇಶಿಸಬೇಕು’ ಎಂದು ಕೋರಿ ಮ್ಯಾಥ್ಯೂ ಥಾಮಸ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್‌​ ಜನರಲ್​ ಕೆ.ಶಶಿಕಿರಣ್​ ಶೆಟ್ಟಿ ಅವರು, ‘ರೇರಾದ ಒಬ್ಬ ಸದಸ್ಯ 2024ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಸದಸ್ಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ತಿಳಿಸಿದರು.
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ರೇರಾದ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ವಿಳಂಬ ಮಾಡಬಾರದು. ಸದಸ್ಯರ ನಿವೃತ್ತಿ ನಂತರ ತಕ್ಷಣವೇ ಅಧಿಕಾರ ವಹಿಸಿಕೊಳ್ಳುವಂತಿರಬೇಕು’ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.
ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ‘ರಾಜ್ಯ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡದೇ ಇರುವ ಕಾರಣ ನ್ಯಾಯಮಂಡಳಿ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.