ಧಾರವಾಡ: ಸಾಹಿತಿ ಗುರುಲಿಂಗ ಕಾಪಸೆ (96) ಅವರು ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾದರು. | |
ನಗರದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. | |
ಗುರುಲಿಂಗ ಕಾಪಸೆ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಿ.ಕೆ.ಲೋಣಿಯಲ್ಲಿ 1928 ಏಪ್ರಿಲ್ 2ರಂದು ಜನಿಸಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ. ‘ಹಲಸಂಗಿ ಗೆಳೆಯರು’, ‘ಅಕ್ಕಮಹಾದೇವಿ’, ‘ಅರವಿಂದರು’, ’ಬಸವೇಶ್ವರ’, ಶಾಲ್ಮಲೆಯಿಂದ ಗೋದಾವರಿಯವರೆಗೆ (ಪ್ರವಾಸ ಕಥನ) ಮೊದಲಾದ ಕೃತಿಗಳನ್ನು ರಚಿಸಿದ್ಧಾರೆ. | |
‘ವರದರಾಜ ಆದ್ಯ ಪ್ರಶಸ್ತಿ’, ‘ಆನಂದಕಂದ ಪ್ರಶಸ್ತಿ’, ’ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ’ ಮೊದಲಾದ ಪುರಸ್ಕಾರಗಳು ಸಂದಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. | |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. | |