NLP_Assignment_1 / Prajavani /'ಇಂಡಿಯಾ' ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಪ್ರಿಯಾಂಕ್ ಹೇಳಿದ್ದೇನು.txt
CoolCoder44's picture
Upload folder using huggingface_hub
2e70779 verified
raw
history blame
2.75 kB
ಕಲಬುರಗಿ: 'ಪ್ರಧಾನಿ, ಉಪಪ್ರಧಾನ ಮಂತ್ರಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ? ಆ ಸಮುದಾಯದಲ್ಲಿನವರ (ಪರಿಶಿಷ್ಟ ಜಾತಿ) ದಕ್ಷತೆ ನೋಡುವುದಿಲ್ಲವಾ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ತಂದೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ಕುರಿತು ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, 'ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ಕೊಡಬೇಕಾದರೆ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ' ಎಂದರು.
'ನಮ್ಮ ಮುಂದೆ ಇರುವುದು ಆದಷ್ಟು ಹೆಚ್ಚು ಸಂಸದರನ್ನು ಗೆಲ್ಲಿಸಿ ಕಳುಹಿಸುವಂತಹದ್ದು. ಯಾರು ಪ್ರಧಾನಿ, ಯಾರು ಉಪ ಪ್ರಧಾನಿ ಎಂಬ ಸವಾಲು ನಮ್ಮ ಮುಂದೆ ಇಲ್ಲ. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 200ರಿಂದ 250 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ಮುಖ್ಯ ಗುರಿ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.