NLP_Assignment_1
/
Prajavani
/'ಇಂಡಿಯಾ' ಜಯಭೇರಿ ಬಿಜೆಪಿ ವಿರುದ್ಧದ ಆಕ್ರೋಶ ಸ್ಪಷ್ಟವಾಗಿದೆ ಡಿ.ಕೆ.ಶಿವಕುಮಾರ್.txt
ಬೆಂಗಳೂರು: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟವು 10 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಬಿಜೆಪಿ ಕೇವಲ ಎರಡರಲ್ಲಿ ಮಾತ್ರ ಗೆದ್ದಿದೆ. | |
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಎಲ್ಲ ಏಳು ರಾಜ್ಯಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧದ ಜನರ ಆಕ್ರೋಶವು ಉಪಚುನಾವಣೆಯಲ್ಲಿ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. 'ಇಂಡಿಯಾ' ಮೈತ್ರಿಕೂಟಕ್ಕೆ ಜನರ ಬೆಂಬಲ ದಿನದಿಂದ ದಿನಕ್ಕೆ ವರ್ಧಿಸುತ್ತಿದೆ' ಎಂದು ಹೇಳಿದ್ದಾರೆ. | |
'ದೇಶದಾದ್ಯಂತ ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ ನಮ್ಮ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇದು ಮತ್ತಷ್ಟು ಹುರುಪನ್ನು ನೀಡಿದೆ' ಎಂದು ಹೇಳಿದ್ದಾರೆ. | |
ಲೋಕಸಭಾ ಚುನಾವಣೆಯ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಕಂಡಿದೆ. ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ತಲಾ ನಾಲ್ಕು ಮತ್ತು ಎಎಪಿ, ಡಿಎಂಕೆ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. | |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. | |