2024: ಪಾಕ್ ಬಗ್ಗುಬಡಿದ ಟೀಮ್ ಇಂಡಿಯಾಗೆ ವಿಶ್ವ ಚಾಂಪಿಯನ್ ಪಟ್ಟ..! ಇಲ್ಲಿನ ಎಡ್ಜ್‌ಬಾಸ್ಟನ್ ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡದ ವಿರುದ್ಧ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2024 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಐದು ವಿಕೆಟ್ ಕಳೆದುಕೊಂಡು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಬರ್ಮಿಂಗ್ಹ್ಯಾಮ್:ಇಲ್ಲಿನ ಎಡ್ಜ್‌ಬಾಸ್ಟನ್ ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡದ ವಿರುದ್ಧ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2024 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಐದು ವಿಕೆಟ್ ಕಳೆದುಕೊಂಡು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ್ ಚಾಂಪಿಯನ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು.ಪಾಕ್ ಪರವಾಗಿ ಶೋಯಬ್ ಮಲ್ಲಿಕ್ 36 ಎಸೆತಗಳಲ್ಲಿ ಮೂರು ಬೌಂಡರಿಗಳ ನೆರವಿನೊಂದಿಗೆ 41 ರನ್ ಗಳಿಸಿದರು.ಇನ್ನೊಂದೆಡೆಗೆ ಕ್ರಮಾನ್ ಅಕ್ಮಲ್ 24,ಮಾಕ್ಸೂದ್ 21,ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಟೀಮ್ ಇಂಡಿಯಾ ಪರವಾಗಿ ಅನುರೀತ್ ಸಿಂಗ್ ಮೂರು ವಿಕೆಟ್ ಗಳನ್ನು ಕಬಳಿಸಿದರು. 🏆 — (@India_Champions) ಪಾಕ್ ತಂಡವು ನೀಡಿದ ಗೆಲುವಿನ ಗುರಿಯನ್ನು ಬೆನ್ನತ್ತಿದ ಇಂಡಿಯಾ ಚಾಂಪಿಯನ್ಸ್ ತಂಡವು 19.1 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 159 ರನ್ ಗಳಿಸುವ ಮೂಲಕ ಗೆಲುವಿನ ಗುರಿಯನ್ನು ತಲುಪಿತು.ಇಂಡಿಯಾ ಚಾಂಪಿಯನ್ಸ್ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಂಬಟಿ ರಾಯಡು 30 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳ ನೆರವಿನಿಂದಾಗಿ 50 ರನ್ ಗಳಿಸಿದರೆ ಇನ್ನೊಂದೆಡೆಗೆ ಯುಸೂಪ್ ಪಠಾಣ್ ಕೇವಲ 16 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೆರವಾದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |