ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ರಾಗ — ಮುಖಾರಿ ತಾಳ — ಛಾಪು ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ | ಭ್ರಷ್ಟಮಾನವ ಹಣೆಯಬರಹವಲ್ಲದೆ ಇಲ್ಲ ||ಪ|| ಸಿರಿವಂತನ ಸ್ನೇಹಮಾಡಿ ನಡೆದರಿಲ್ಲ | ಪರಿಪರಿಯಲಿ ವಿದ್ಯೆ ಕಲಿತರಿಲ್ಲ || ನರಿಯ ಬುದ್ಧಿಯಲಿ ನಡೆದುಕೊಂಡರು ಇಲ್ಲ | ಅರಿಯದೆ ಹಲವ ಹಂಬಲಿಸಿದರಿಲ್ಲ ||೧|| ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲ | ಕಂಡಕಂಡವರಿಗೆ ಕೈಮುಗಿದರಿಲ್ಲ || ಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲ ಪ್ರ – | ಚಂಡನಾದರೂ ಇಲ್ಲ ಪರಿಹಾಸ್ಯವಲ್ಲ ||೨|| ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲ | ಬೆಟ್ಟಗಳನು ಕಿತ್ತಿ ಇಟ್ಟರಿಲ್ಲ || ಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯ | ಕೊಟ್ಟವರಿಗೆ ಉಂಟು ಕೊಡದವರಿಗೆ ಇಲ್ಲ ||೩|| ***** ರಾಗ — ಮೋಹನ ತಾಳ — ಅಟ್ಟ ಆರು ಬಾಳಿದರೇನು ಆರು ಬದುಕಿದರೇನು | ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ|| ಉಣ್ಣಬರದವರಲ್ಲಿ ಊರೂಟವಾದರೆ ಏನು | ಹಣ್ಣು ಬಿಡದ ಮರಗಳು ಹಾಳಾದರೇನು || ಕಣ್ಣಿಲದವಗಿನ್ನು […] ರಾಗ — ಭೈರವಿ ತಾಳ — ರೂಪಕ ನಾನು ನೀನು ಎನ್ನದಿರೋ ಹೀನಮಾನವ |ಜ್ಞಾನದಿಂದ ನಿನ್ನ ನೀನೆ ತಿಳಿದುನೋಡೆಲೊ – ಪ್ರಾಣಿ ||ಪ|| ಹೆಣ್ಣು – ಹೊನ್ನು – ಮಣ್ಣು ಮೂರು ನಿನ್ನವೇನೆಲೊ |ಅನ್ನದಿಂದ […] ರಾಗ — ಕಾಂಬೋದಿ ತಾಳ — ಝಂಪೆ ತಲ್ಲಣಿಸದಿರು ಕಂಡೆಯಾ ತಾಳು ಮನವೆ – ಸ್ವಾಮಿ | ನಿಲ್ಲದಲೆ ರಕ್ಷಿಸುವ ಸಂದೇಹ ಬೇಡ ||ಪ|| ಬೆಟದಾ ತುದಿಯಲ್ಲಿ ಬೆಳೆದ ವೃಕ್ಷಂಗಳಿಗೆ | ಕಟ್ಟೆಕಟ್ಟುತ ನೀರ […] ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ ಟಿಪ್ಪಣಿ * ಹೆಸರು * ಮಿಂಚೆ * ಜಾಲತಾಣ ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ. This site uses Akismet to reduce spam. Learn how your comment data is processed. ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…